Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime NewsLocal News

ಆರ್‌ಟಿಪಿಎಸ್ ನಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು

ಆರ್‌ಟಿಪಿಎಸ್ ನಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು
ರಾಯಚೂರು: ರಾಯಚೂರು ಶಾಖೋತ್ಪನ್ನ ಕೇಂದ್ರದ ವಿದ್ಯುತ್ ಸ್ಥಾವರದ 4ನೇ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ಯಾದಗಿರಿ ಮೂಲದ ನಿಂಗಪ್ಪ(45) ಮೃತ ಕಾರ್ಮಿಕರಾಗಿದ್ದು, ಆರ್‌ಟಿಪಿಎಸ್ 4ನೇ ಘಟಕದಲ್ಲಿ ಇಎಸ್‌ಪಿಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ವೇಳೆ ವಿದ್ಯುತ್ ಸ್ಪರ್ಶವಾಗಿ ಕಾರ್ಮಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಲವು ಬಾರಿ ಈ ರೀತಿಯಾದ ಘಟನೆಗಳು ನಡೆಯುತ್ತಿದ್ದರೂ. ಕಾರ್ಮಿಕರಿಗೆ ಸೇವಾ ಭದ್ರತೆ ನೀಡದ ಆರ್‌ಟಿಪಿಎಸ್ ಆಡಳಿತ ಮಂಡಳಿಯ ವಿರುದ್ಧ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಆರ್‌ಟಿಪಿಎಸ್ ಘಟಕದ ಎದುರು ದಿಡೀರ್ ಪ್ರತಿಭಟನೆ ನಡೆಸಿ ಕಾರ್ಮಿಕರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಮತ್ತು ಮೃತ ಕಾರ್ಮಿಕರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ. 
Megha News